10 ಅಕ್ರಮ ಬಾಂಗ್ಲಾ ವಲಸಿಗರಿಗೆ ಜೈಲು ಶಿಕ್ಷೆ ಬಳಿಕ ಶಿಕ್ಷೆ ಗಡಿಪಾರು

ಲೋಕಬಂಧು ನ್ಯೂಸ್ | ಉಡುಪಿ
ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪತ್ತೆಯಾಗಿದ್ದ 10 ಮಂದಿ ಅಕ್ರಮ ಬಾಂಗ್ಲಾದೇಶಿ ವಲಸಿಗರಿಗೆ ನ್ಯಾಯಾಲಯ ಎರಡು ವರ್ಷಗಳ ಶಿಕ್ಷೆ ಹಾಗೂ ದಂಡ ವಿಧಿಸಿದ್ದು, ಶಿಕ್ಷೆಯ ಅವಧಿ ಪೂರ್ಣಗೊಂಡ ಹಿನ್ನೆಲೆಯಲ್ಲಿ ಅವರನ್ನು ಗಡಿಪಾರು ಪ್ರಕ್ರಿಯೆಗಾಗಿ ಪಶ್ಚಿಮ ಬಂಗಾಳಕ್ಕೆ ಕರೆದೊಯ್ಯಲಾಗಿದೆ.
2024ರ ಅ.11ರಂದು ವಡಭಾಂಡೇಶ್ವರ ಬಸ್ ನಿಲ್ದಾಣದ ಬಳಿ ಅನುಮಾನಾಸ್ಪದವಾಗಿ ಕಂಡುಬಂದ 10 ಮಂದಿ ಅಕ್ರಮ ಬಾಂಗ್ಲಾದೇಶಿ ವಲಸಿಗರನ್ನು ಮಲ್ಪೆ ಪೊಲೀಸರು ಪತ್ತೆಹಚ್ಚಿ ವಿಚಾರಣೆ ನಡೆಸಿದ್ದರು.


ಆ ಸಂಬಂಧ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ, ತನಿಖೆ ನಡೆಸಿದ ಪೊಲೀಸರು ನ್ಯಾಯಾಲಯಕ್ಕೆ ಅಂತಿಮ ವರದಿ ಸಲ್ಲಿಸಿದ್ದರು.