ಡಾ.ಹೆಗ್ಗಡೆ 79ನೇ ಜನ್ಮದಿನ: ರಾಷ್ಟ್ರಪತಿ, ಪ್ರಧಾನಿ ಶುಭಾಶಯ

ಲೋಕಬಂಧು ನ್ಯೂಸ್ ಉಜಿರೆ
ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರ 79ನೇ ಜನ್ಮದಿನದ ಹಿನ್ನೆಲೆಯಲ್ಲಿ ಬುಧವಾರ ಭಾರತದ ರಾಷ್ಟ್ರಪತಿ ದ್ರೌಪದಿ ಮುರ್ಮು ಹಾಗೂ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಪ್ರತ್ಯೇಕ ಶುಭಾಶಯ ಪತ್ರಗಳ ಮೂಲಕ ಹೆಗ್ಗಡೆಯವರಿಗೆ ಜನ್ಮದಿನದ ಹಾರ್ದಿಕ ಶುಭಾಶಯ ತಿಳಿಸಿದ್ದಾರೆ.