ಲೋಕಬಂಧು ನ್ಯೂಸ್ ಉಡುಪಿ
ಸಮಾಜದ ಮುಖವಾಣಿಯಾಗಿ ಕೆಲಸ ಮಾಡಬೇಕಾದ ಮೆಟಾ, ಫೇಸ್ ಬುಕ್ ಇನ್ನಿತರ ಸಾಮಾಜಿಕ ಜಾಲತಾಣಗಳು ಬಿಜೆಪಿ, ಆರ್.ಎಸ್.ಎಸ್ ಏಜೆಂಟ್'ನಂತೆ ಕೆಲಸ ಮಾಡುತ್ತಿವೆ ಎಂದು ಕರ್ನಾಟಕ ವಿಧಾನ ಪರಿಷತ್ ಸದಸ್ಯ ಐವನ್ ಡಿ'ಸೋಜಾ ಆರೋಪಿಸಿದರು.ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಶುಕ್ರವಾರ ನಡೆದ 'ಮೆಟಾ ಬಿಜೆಪಿ ಕಾ ಬೇಟಾ' ಅಭಿಯಾನದಲ್ಲಿ ಅವರು ಮಾತನಾಡಿದರು.
ಪ್ರಧಾನಿ ನರೇಂದ್ರ ಮೋದಿ ಅವರು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಲೋಕಸಭೆಯಲ್ಲಿ ಮಾತನಾಡುವಾಗ ಅವರ ಮೈಕ್ ಸ್ವಿಚ್ ಆಫ್ ಮಾಡುವ ಕೆಲಸ ಮಾಡಿದ್ದಾರೆ. ಅಲ್ಲದೆ, ಸಾಮಾಜಿಕ ಜಾಲತಾಣದಲ್ಲೂ ಕಾಂಗ್ರೆಸ್ ಧ್ವನಿಯನ್ನು ಅಡಗಿಸುವ ವ್ಯವಸ್ಥಿತ ಪ್ರಯತ್ನವನ್ನು ಬಿಜೆಪಿ ಮಾಡುತ್ತಿದ್ದು, ಆ ಮೂಲಕ ಸಮಾಜದಲ್ಲಿ ದಂಗೆ ಹೇಳುವ ಸನ್ನಿವೇಶ ನಿರ್ಮಾಣವಾಗಿದೆ. ಮೆಟಾದಂಥ ಸಾಮಾಜಿಕ ಸಂಸ್ಥೆ ಬಿಜೆಪಿಯ ಬೇಟಾದಂತೆ ಕೆಲಸ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕಾಂಗ್ರೆಸ್ ಜಿಲ್ಲಾಧ್ಯಕ್ಷ ಕಿಶನ್ ಹೆಗ್ಡೆ ಕೊಳ್ಕೆಬೈಲ್, ಕಾಂಗ್ರೆಸ್ ಮುಖಂಡರಾದ ಪ್ರಸಾದ್ ರಾಜ್ ಕಾಂಚನ್, ಸುರೇಶ್ ಶೆಟ್ಟಿ ಬನ್ನಂಜೆ, ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಕೃಷ್ಣ ಶೆಟ್ಟಿ ಬಜಗೋಳಿ ಮೊದಲಾದವರಿದ್ದರು.