ಲೋಕಬಂಧು ನ್ಯೂಸ್ ಉಡುಪಿ
ಇಲ್ಲಿನ ಪ್ರಸಾದ್ ನೇತ್ರಾಲಯ್ ವತಿಯಿಂದ ಕಳೆದ ತಿಂಗಳು ಗೋವಾದಲ್ಲಿ ನಡೆದ ಉಚಿತ ನೇತ್ರ ತಪಾಸಣೆ ಮತ್ತು ಶಸ್ತ್ರಚಿಕಿತ್ಸಾ ಶಿಬಿರದಲ್ಲಿ ಆಯ್ಕೆಯಾದ ಫಲಾನುಭವಿಗಳಿಗೆ ಈಚೆಗೆ ಉಚಿತ ಕನ್ನಡಕ ವಿತರಿಸಲಾಯಿತು.ಕೇಂದ್ರ ಸಚಿವ ಶ್ರೀಪಾದ ಎಸ್ಸೋ ನಾಯಕ್ ಅವರ ಗೃಹ ಕಚೇರಿಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಪ್ರಸಾದ್ ನೇತ್ರಾಲಯ ಸಮೂಹ ಕಣ್ಣಿನ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ.ಕೃಷ್ಣಪ್ರಸಾದ್ ಕೂಡ್ಲು ಕನ್ನಡಕ ವಿತರಿಸಿದರು.
ಗೋವಾ ಶಾಸಕ ಸಿದ್ದೇಶ್ ಹಾಗೂ ಒನ್ಸೈಟ್ ಎಸ್ಸಿಲಾರ್ ಲಕ್ಸೊಟ್ಟಿಕಾ ಫೌಂಡೇಶನ್ ಮುಖ್ಯ ವ್ಯವಸ್ಥಾಪಕ ಧರ್ಮಪ್ರಸಾದ್ ರೈ ಇದ್ದರು.
ಸುಮಾರು 260 ಫಲಾನುಭವಿಗಳು ಕಾರ್ಯಕ್ರಮದ ಪ್ರಯೋಜನ ಪಡೆದರು.