ಕಣಚೂರು ಮೆಡಿಕಲ್ ವಿದ್ಯಾರ್ಥಿನಿ ಪತ್ತೆ: ಇಬ್ಬರು ಪೊಲೀಸ್ ವಶಕ್ಕೆ

ಲೋಕಬಂಧು ನ್ಯೂಸ್ ಮಂಗಳೂರು
ಕಣಚೂರು ಮೆಡಿಕಲ್ ಕಾಲೇಜಿನ ವಿದ್ಯಾರ್ಥಿನಿ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ವಿದ್ಯಾರ್ಥಿನಿಯನ್ನು ಪತ್ತೆಹಚ್ಚಿದ್ದಾರೆ.ಬೆಳ್ತಂಗಡಿಯಲ್ಲಿರುವ ಮನೆಗೆ ಬೀಗ ಹಾಕಿ ವಿದ್ಯಾರ್ಥಿನಿಯನ್ನು ಹೆತ್ತವರು ಕೇರಳಕ್ಕೆ ಕರೆದೊಯ್ದು, ಸಂಬಂಧಿಕರ ಮನೆಯಲ್ಲಿ ಇರಿಸಿದ್ದರು ಎನ್ನಲಾಗಿದೆ.


ಕಾರ್ಯಾಚರಣೆ ನಡೆಸಿದ ಪೊಲೀಸರು ವಿದ್ಯಾರ್ಥಿನಿಯನ್ನು ಪತ್ತೆಹಚ್ಚಿ, ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ.


ಕಾಲೇಜು ಆವರಣದಿಂದ ವಿದ್ಯಾರ್ಥಿನಿಯನ್ನು ಬಲವಂತವಾಗಿ ಕರೆದೊಯ್ದ ಆರೋಪದಡಿ ಇಬ್ಬರನ್ನು ವಶಕ್ಕೆ ಪಡೆಯಲಾಗಿದೆ. ಪೊಲೀಸ್ ವಿಚಾರಣೆ ವೇಳೆ ವಿದ್ಯಾರ್ಥಿನಿ ಹೆತ್ತವರೊಂದಿಗೆ ಹೋಗಲು ನಿರಾಕರಿಸಿರುವ ಹಿನ್ನೆಲೆಯಲ್ಲಿ ಆಕೆಯನ್ನು ವೈದ್ಯಕೀಯ ತಪಾಸಣೆಗೆ ಕಳುಹಿಸಲಾಗಿದ್ದು, ಬಳಿಕ ಆಕೆಯ ಇಚ್ಛೆಯಂತೆ ಬಯಸಿದ ಸ್ಥಳಕ್ಕೆ ಅಥವಾ ಸಾಂತ್ವನ ಕೇಂದ್ರಕ್ಕೆ ಕಳುಹಿಸುವ ಕುರಿತು ಪೊಲೀಸರು ಚಿಂತನೆ ನಡೆಸಿದ್ದಾರೆ.