ಲೋಕಬಂಧು ನ್ಯೂಸ್ ಕಾಪು
ಕಾಪು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ದಶಮಾನೋತ್ಸವದ ಲಾಂಛನ (ಲೋಗೋ) ಹಾಗೂ ಡೈರೆಕ್ಟರಿಯನ್ನು ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಸುಬ್ರಹ್ಮಣ್ಯ ಕುರ್ಯ ಬುಧವಾರ ಇಲ್ಲಿನ ಪತ್ರಿಕಾ ಭವನದಲ್ಲಿ
ಬಿಡುಗಡೆಗೊಳಿಸಿದರು.ಬಳಿಕ ಮಾತನಾಡಿದ ಅವರು, ಕಾಪು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ದಶಮಾನೋತ್ಸವ ನಿಮಿತ್ತ ಹಮ್ಮಿಕೊಳ್ಳಲಿರುವ ದಶ ಕಾರ್ಯಕ್ರಮಗಳು ಯಶಸ್ವಿಯಾಗಲಿ ಎಂದು ಹಾರೈಸಿದರು.
ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ನಝೀರ್ ಪೊಲ್ಯ, ಕಾರ್ಯದರ್ಶಿ ಸುರೇಶ್ ಎರ್ಮಾಳು, ಕಾಪು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಹಮೀದ್ ಪಡುಬಿದ್ರಿ, ಕಾರ್ಯದರ್ಶಿ ಪುಂಡಲೀಕ ಮರಾಠೆ, ಕೋಶಾಧಿಕಾರಿ ಸಂತೋಷ್ ಉಳಿಯಾರು, ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರತಿನಿಧಿಗಳಾದ ಹರೀಶ್ ಹೆಜಮಾಡಿ ಮತ್ತು ವಿಜಯ ಆಚಾರ್ಯ ಉಚ್ಚಿಲ, ಕಾಪು ತಾಲೂಕು ಪತ್ರಕರ್ತರ ಸಂಘದ ಪೂರ್ವ ಅಧ್ಯಕ್ಷರು, ಸದಸ್ಯರು ಇದ್ದರು.