ಗ್ರಾಮಾನುಭವ ಕಾರ್ಯಕ್ರಮಕ್ಕೆ ಚಾಲನೆ

ಲೋಕಬಂಧು ನ್ಯೂಸ್ ಉಡುಪಿ
ಶಾಲಾ ಶಿಕ್ಷಣ ಇಲಾಖೆ ಮೂಲಕ ಜಾರಿಗೊಳ್ಳುತ್ತಿರುವ 'ಗ್ರಾಮಾನುಭವ' ಜಿಲ್ಲಾ ಹಂತದ‌ ಕಾರ್ಯಕ್ರಮವನ್ನು‌ ಅಜ್ಜರಕಾಡು ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಜಿಲ್ಲಾ ಮಟ್ಟದ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ಉಡುಪಿ ಜಿಲ್ಲಾ ಉಸ್ತುವಾರಿ ಹಾಗೂ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ರಿಜ್ವಾನ್ ಅರ್ಷದ್ ಉದ್ಘಾಟಿಸಿದರು.ಇದೇ ಸಂದರ್ಭದಲ್ಲಿ ಅವರು ಗ್ರಾಮಾನುಭವದ ಮಾಹಿತಿ ಪಡೆದು, ಮಕ್ಕಳಿಗೆ ಶುಭ ಹಾರೈಸಿದರು.


ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ., ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಹೆಚ್ಚುವರಿ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ್, ಕರಾವಳಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಎಂ.ಎ. ಗಪೂರ್, ಶ್ರೀನಾರಾಯಣಗುರು ಅಭಿವೃದ್ಧಿ ನಿಗಮ ಅಧ್ಯಕ್ಷ ಮಂಜುನಾಥ ಪೂಜಾರಿ, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಎಸ್.ಎಸ್. ಕಾದ್ರೋಳ್ಳಿ, ಉಡುಪಿ ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶ ಡಾ.ಅಶೋಕ ಕಾಮತ್, ಶಿಕ್ಷಣಾಧಿಕಾರಿ ಗಂಗಾಧರಸ್ವಾಮಿ, ಡಿವೈಪಿಸಿಗಳಾದ ರಮೇಶ್ ಎಂ.ಎನ್. ಮತ್ತು ತಿಪ್ಪೇಶ್ ನಾಯಕ್, ಉಡುಪಿ ವಲಯ ಕ್ಷೇತ್ರ ಶಿಕ್ಷಣಾಧಿಕಾರಿ ಡಾ.ಯಲ್ಲಮ್ಮ, ಡಯಟ್ ಉಪನ್ಯಾಸಕ ಯೋಗಾನರಸಿಂಹಸ್ವಾಮಿ, ಬಾಲಕಿಯರ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಮುಖ್ಯ ಶಿಕ್ಷಕಿ ಇಂದಿರಾ ಹಾಗೂ ದೈಹಿಕ ಶಿಕ್ಷಣ ಶಿಕ್ಷಕ ವಸಂತ ಜೋಗಿ ಹಾಗೂ ಶಾಲಾ ವಿದ್ಯಾರ್ಥಿಗಳು ಇದ್ದರು‌.