ಲೋಕಬಂಧು ನ್ಯೂಸ್ ಬೆಂಗಳೂರು
ರಾಜ್ಯ ರಾಜಧಾನಿ ಬೆಂಗಳೂರಿಗೆ ಆಗಮಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ತಾವರೆಕೆರೆ ಮೆಟ್ರೋ ನಿಲ್ದಾಣದಲ್ಲಿ ನಮ್ಮ ಮೆಟ್ರೋದ ಪಿಂಕ್ ಲೈನ್‌ಗೆ ಚಾಲನೆ ನೀಡಿದರು.ಬಳಿಕ ಆರು ಕೋಚ್‌ಗಳ ಮೆಟ್ರೋ ರೈಲಿನಲ್ಲಿ ಗಣ್ಯರೊಂದಿಗೆ ಪ್ರಯಾಣ ಬೆಳೆಸಿದರು.
ಪ್ರಧಾನಿ ಮೋದಿ ಅವರೊಂದಿಗೆ ರಾಜ್ಯಪಾಲೆ ಡಾ.ಸುಧಾ ಯಾದವ್, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಚಿವ ಕೃಷ್ಣಬೈರೇಗೌಡ, ಸಂಸದ ತೇಜಸ್ವಿ ಸೂರ್ಯ ಸೇರಿದಂತೆ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಅಧಿಕಾರಿಗಳು ಪ್ರಯಾಣಿಸಿದರು.
ಪ್ರಶಾಂತಿ ಕುಟೀರದಿಂದ ಹೆಲಿಕಾಪ್ಟರ್ ಮೂಲಕ ತಾವರೆಕೆರೆಗೆ ಆಗಮಿಸಿದ ಮೋದಿ ಅವರಿಗೆ ಬಿಜೆಪಿ ಕಾರ್ಯಕರ್ತರು ಭರ್ಜರಿ ಸ್ವಾಗತ ಕೋರಿದರು. ರಸ್ತೆಯುದ್ದಕ್ಕೂ ಜಮಾಯಿಸಿದ್ದ ಕಾರ್ಯಕರ್ತ ಮತ್ತು ಅಭಿಮಾನಿಗಳು ಮೋದಿ ಪರ ಘೋಷಣೆಗಳನ್ನು ಕೂಗಿದರು. ಸದಕ್ಕೆ ಪ್ರತಿಯಾಗಿ ಮೋದಿ ಕೈಬೀಸುತ್ತಾ ಮೆಟ್ರೋ ನಿಲ್ದಾಣಕ್ಕೆ ತೆರಳಿದರು.