ಯಶವಂತಪುರ- ಮಂಗಳೂರು-ಮಡಗಾಂವ್ ವಂದೇ ಭಾರತ್‌ ರೈಲು ಸಂಚಾರಕ್ಕೆ ದಿನ ನಿಗದಿ

ಲೋಕಬಂಧು ನ್ಯೂಸ್ ಬೆಂಗಳೂರು
ಯಶವಂತಪುರ- ಮಂಗಳೂರು- ಮಡಗಾಂವ್ ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲಿಗೆ ನ. 13ರಂದು ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರಿನಿಂದ ವೀಡಿಯೋ ಕಾನ್ಸರೆನ್ಸ್ ಮೂಲಕ ಚಾಲನೆ ನೀಡಲಿದ್ದಾರೆ.ರೈಲು ಕಬಕ-ಪುತ್ತೂರು, ಸಕಲೇಶಪುರ ಮತ್ತು ಹಾಸನ ನಿಲ್ದಾಣಗಳಲ್ಲಿ ನಿಲುಗಡೆ ನೀಡಲಿದೆ.


ಇದೇ ಸಂದರ್ಭದಲ್ಲಿ ಅಮೃತ್‌ ಭಾರತ್‌ ನಿಲ್ದಾಣ ಯೋಜನೆಯಡಿ ಸಕಲೇಶಪುರ ರೈಲು ನಿಲ್ದಾಣದ ಪುನ‌ರ್ ಅಭಿವೃದ್ಧಿ ಕಾಮಗಾರಿಗೂ ಚಾಲನೆ ದೊರೆಯಲಿದೆ. ಅಪರಾಹ್ನ 2 ಗಂಟೆಗೆ ಮಂಗಳೂರು ಜಂಕ್ಷನ್ ರೈಲು ನಿಲ್ದಾಣದಲ್ಲಿ ಸಚಿವ ಅಶ್ವಿನಿ ವೈಷ್ಣವ್ ಈ ರೈಲಿಗೆ ಹಸಿರು ನಿಶಾನೆ ತೋರಿಸಲಿದ್ದಾರೆ.