ಹಣತೆಗೆ ಎಣ್ಣೆ ಬತ್ತಿ ಮುಹೂರ್ತ

ಲೋಕಬಂಧು ನ್ಯೂಸ್ | ಉಡುಪಿ
ಇಲ್ಲಿನ ಶ್ರೀಕೃಷ್ಣ ಮಠದಲ್ಲಿ ಉತ್ಥಾನ ದ್ವಾದಶಿಯಿಂದ ಆರಂಭಗೊಳ್ಳುವ ಕಾರ್ತೀಕ ಲಕ್ಷ ದೀಪೋತ್ಸವ ಹಿನ್ನೆಲೆಯಲ್ಲಿ ಶನಿವಾರ ರಥಬೀದಿಯ ಸುತ್ತ ಹಣತೆಗೆ ಎಣ್ಣೆ ಬತ್ತಿ ಹಾಕುವ ಕಾರ್ಯಕ್ಕೆ ಪರ್ಯಾಯ ಶೀರೂರು ಮಠಾಧೀಶ ಶ್ರೀ ವೇದವರ್ಧನತೀರ್ಥ ಶ್ರೀಪಾದರು ಚಾಲನೆ ನೀಡಿದರು.
ಕೃಷ್ಣಾಪುರ ಮಠಾಧೀಶ ಶ್ರೀ ವಿದ್ಯಾಸಾಗರತೀರ್ಥ ಶ್ರೀಪಾದರು ಮತ್ತು ಕಾಣಿಯೂರು ಶ್ರೀ ವಿದ್ಯಾವಲ್ಲಭತೀರ್ಥ ಶ್ರೀಪಾದರು ಹಾಗೂ ಭಕ್ತಾದಿಗಳು ಪಾಲ್ಗೊಂಡಿದ್ದರು.
ಶ್ರೀಮಠದ ದಿವಾನ ಡಾ.ಉದಯಕುಮಾರ್ ಸರಳತ್ತಾಯ, ಪಾರುಪತ್ಯೆಗಾರ ಸುದರ್ಶನ ಭಟ್ ಕಾಪು ಮೊದಲಾದವರಿದ್ದರು.