ಶಿಕ್ಷಣ ವಂಚಿತ 30‌ ಮಕ್ಕಳ ರಕ್ಷಣೆ

ಲೋಕಬಂಧು ನ್ಯೂಸ್ ಬ್ರಹ್ಮಾವರ
ತಾಲೂಕಿನ ಫಿಶ್ ಫ್ಯಾಕ್ಟರಿಯೊಂದರಲ್ಲಿ ಅಕ್ಕ ಪಡೆ ತಂಡ ಸಿಆರ್‌ಪಿ ಹಾಗೂ ಇಸಿಒ ಇಲಾಖೆಗಳ ಸಹಯೋಗದೊಂದಿಗೆ ವಿಶೇಷ ಕಾರ್ಯಾಚರಣೆ ನಡೆಸಿತು.
ಆ ವೇಳೆ ಫ್ಯಾಕ್ಟರಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರ ಸುಮಾರು 30 ಮಕ್ಕಳು ಶಿಕ್ಷಣದಿಂದ ವಂಚಿತರಾಗಿ ಶಾಲೆಗೆ ತೆರಳದೆ ಫ್ಯಾಕ್ಟರಿಯ ಸುತ್ತಮುತ್ತ ಕಾಲ ಕಳೆಯುತ್ತಿರುವುದು ಕಂಡುಬಂದಿದೆ.


ಅಧಿಕಾರಿಗಳು 6 ವರ್ಷ ಮೇಲ್ಪಟ್ಟ ಹಾಗೂ 14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳನ್ನು ರಕ್ಷಿಸಿ ಮಕ್ಕಳ ಕಲ್ಯಾಣ ಸಮಿತಿ ಮುಂದೆ ಹಾಜರುಪಡಿಸಿದರು. ರಕ್ಷಿಸಲಾದ ಮಕ್ಕಳಲ್ಲಿ 7 ಬಾಲಕಿಯರನ್ನು ಬಾಲಕಿಯರ ಬಾಲಮಂದಿರಕ್ಕೆ ಹಾಗೂ 23 ಬಾಲಕರನ್ನು ಬಾಲಕರ ಬಾಲಮಂದಿರಕ್ಕೆ ದಾಖಲಿಸುವ ಪ್ರಕ್ರಿಯೆ ಕೈಗೊಳ್ಳಲಾಯಿತು.