ಹಿರಿಯ ಸಾಹಿತಿ ವ್ಯಾಸರಾವ್ ಬಲ್ಲಾಳ್ ನಿಧನ

ಲೋಕಬಂಧು ನ್ಯೂಸ್ ಮುಂಬೈ
ಹಿರಿಯ ಸಾಹಿತಿ ಡಾ.ವ್ಯಾಸರಾವ್ ನಿಂಜೂರು (86) ಮಂಗಳವಾರ ನಿಧನರಾದರು.ಉಡುಪಿ ಜಿಲ್ಲೆಯ ತೆಂಕನಿಡಿಯೂರು ಮೂಲದವರಾದ ಅವರು ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದರು. ಸಾಹಿತಿ ಮಾತ್ರವಲ್ಲದೆ, ಸಂಶೋಧಕ ಹಾಗೂ ಚಿಂತಕರಾಗಿದ್ದರು.
2006ರಲ್ಲಿ ಇನ್ನದಲ್ಲಿ ನಡೆದ ಉಡುಪಿ ಜಿಲ್ಲಾ‌ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು.


ಮುಂಬೈನ ಭಾಭಾ ಅಣು ಸಂಶೋಧನಾ ಕೇಂದ್ರದಲ್ಲಿ ವಿಜ್ಞಾನಿಯಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದ ಅವರು, ವಿಜ್ಞಾನ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿದರೂ ಕನ್ನಡ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿ ಬಗ್ಗೆ ಅಪಾರ ಆಸಕ್ತಿ ಹೊಂದಿದ್ದರು. ಕಥೆ, ಲೇಖನ ಹಾಗೂ ಸಾಹಿತ್ಯ ಸಂಶೋಧನೆ ಮೂಲಕ ಕನ್ನಡ ಸಾಹಿತ್ಯಕ್ಕೆ ತಮ್ಮದೇ ಆದ ಕೊಡುಗೆ ನೀಡಿದ್ದಾರೆ.


ಮೃತರು ಪುತ್ರ, ಪುತ್ರಿಯನ್ನು ಅಗಲಿದ್ದಾರೆ.