ಲೋಕಬಂಧು ನ್ಯೂಸ್ | ಉಡುಪಿ
ಸಮಾಜ ಸೇವಕ ವಿಶು ಶೆಟ್ಟಿ ಅಂಬಲಪಾಡಿ ಬೈಕ್'ನಲ್ಲಿ ತೆರಳುತ್ತಿದ್ದಾಗ ನಿಟ್ಟೂರು ಬಳಿ ಕೆ.ಎಸ್.ಆರ್.ಟಿ.ಸಿ ವೋಲ್ವೊ ಬಸ್ ಬಡಿದಿದ್ದು, ಅವರ ಕೈ ಹಾಗೂ ಕಾಲಿಗೆ ಪೆಟ್ಟಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಬಸ್ಸನ್ನು ನಿಲ್ಲಿಸದೇ ಚಲಾಯಿಸಿಕೊಂಡು ಹೋಗಿದ್ದು, ಆ ಬಗ್ಗೆ ಉಡುಪಿ ನಗರ ಸಂಚಾರಿ ಠಾಣೆಗೆ ಮಾಹಿತಿ ನೀಡಲಾಗಿದೆ.
ಘಟನೆ ಸಂದರ್ಭದಲ್ಲಿ ಅದೇ ಮಾರ್ಗದಲ್ಲಿ ಬರುತ್ತಿದ್ದ ಅಂಬಲಪಾಡಿ ಪಡುಮನೆ ಸುರೇಶ್ ತಕ್ಷಣ ವಿಶು ಶೆಟ್ಟಿ ಅವರನ್ನು ಆಸ್ಪತ್ರೆಗೆ ದಾಖಲಿಸಿದರು. ವೈದ್ಯರು 20 ದಿನಗಳ ವಿಶ್ರಾಂತಿಗೆ ಸಲಹೆ ನೀಡಿದ್ದಾರೆ.
