ಲೋಕಬಂಧು ನ್ಯೂಸ್ ಉಡುಪಿ
ವಿಶ್ವದಲ್ಲಿಯೇ ಗರಿಷ್ಠ ಸಂಖ್ಯೆಯ ವಿದ್ಯಾರ್ಥಿಗಳನ್ನು ಹೊಂದಿರುವ ರಾಷ್ಟ್ರ ನಮ್ಮ ಭಾರತ. ಉಡುಪಿ ಜಿಲ್ಲೆ ರಾಜ್ಯದ ಪ್ರಥಮ ಸಂಪೂರ್ಣ ಸಾಕ್ಷರತಾ ಜಿಲ್ಲೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದು, ಈ ಗೌರವಕ್ಕೆ ಜಿಲ್ಲೆಯ ಶಿಕ್ಷಕರು ಹಾಗೂ ವಿದ್ಯಾರ್ಥಿಗಳ ಕೊಡುಗೆ ಅಪಾರ. ನರೇಂದ್ರ ಮೋದಿ ಆಶಯದ ವಿಕಸಿತ ಭಾರತ ನಿರ್ಮಾಣದ ಸಂಕಲ್ಪಕ್ಕೆ ವಿದ್ಯಾರ್ಥಿಗಳೇ ಪ್ರೇರಣೆ ಎಂದು ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಹೇಳಿದರು.ಮಕ್ಕಳ ದಿನಾಚರಣೆ ಅಂಗವಾಗಿ ಉಡುಪಿ ವಿಧಾನಸಭಾ ಕ್ಷೇತ್ರದ ಸರಕಾರಿ ಹಾಗೂ ಅನುದಾನಿತ ಪ್ರಾಥಮಿಕ, ಪ್ರೌಢ ಹಾಗೂ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗೆ 15 ಲ.ರೂ. ವೆಚ್ಚದಲ್ಲಿ ಸುಮಾರು 20 ಸಾವಿರ ಪೆನ್ನು ವಿತರಣೆ ಕಾರ್ಯಕ್ರಮಕ್ಕೆ ಕಡೆಕಾರು ಸರಕಾರಿ ಮಾದರಿ ಹಿ.ಪ್ರಾ .ಶಾಲೆಯಲ್ಲಿ ಶನಿವಾರ ವಿದ್ಯಾರ್ಥಿಗಳಿಗೆ ಪೆನ್ನು ವಿತರಿಸಿ ಚಾಲನೆ ನೀಡಿ ಮಾತನಾಡಿದರು.
ಶಾಸಕನಾಗಿ ಶಿಕ್ಷಣ ಹಾಗೂ ಆರೋಗ್ಯಕ್ಕೆ ಪ್ರಥಮ ಆದ್ಯತೆ ನೀಡುವ ನಿಟ್ಟಿನಲ್ಲಿ ನಿರಂತರವಾಗಿ ಕಾರ್ಯಪ್ರವೃತ್ತ ರಾಗಿದ್ದು, ಶಾಲಾ ಕಾಲೇಜುಗಳ ಮೂಲ ಸೌಕರ್ಯ ಅಭಿವೃದ್ಧಿ, ವಿದ್ಯಾರ್ಥಿ ನಿಲಯ ಹಾಗೂ ಶಿಕ್ಷಣಕ್ಕೆ ಪೂರಕ ವ್ಯವಸ್ಥೆ ಮೂಲಕ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಅಗತ್ಯ ಸಹಕಾರ ನೀಡುವ ಭರವಸೆ ನೀಡಿದರು.
ಉಡುಪಿ ಕ್ಷೇತ್ರದ ವಿವಿಧ ಶಾಲೆ ಹಾಗೂ ಕಾಲೇಜುಗಳಿಗೆ ಸ್ಥಳೀಯ ಜನಪ್ರತಿನಿಧಿಗಳು, ಪಕ್ಷದ ಕಾರ್ಯಕರ್ತರು, ಶಾಲಾಭಿವೃದ್ಧಿ ಸಮಿತಿ ಪದಾಧಿಕಾರಿಗಳು ತೆರಳಿ ವಿದ್ಯಾರ್ಥಿಗಳಿಗೆ ಪೆನ್ನು ವಿತರಿಸಿ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಸ್ಥಳೀಯ ಮುಖಂಡರಾದ ರಘುನಾಥ ಕೋಟ್ಯಾನ್, ಗಂಗಾಧರ ಜಿ., ಪ್ರದೀಪ್ ಚಂದ್ರ ಕುತ್ಪಾಡಿ, ಸುನೀಲ್ ಸಾಲ್ಯಾನ್, ಶೇಖರ್ ಅಂಚನ್, ದೀಪಕ್ ಪುತ್ರನ್, ಜಯಕರ ಸನಿಲ್, ನಂದ ಕುಮಾರ್, ವನಜ ಜಯಕರ್, ವಿನೋದಿನಿ, ಅರುಣ್ ಕಡೆಕಾರ್, ಅಶೋಕ್ ಪಾಲನ್
ಶಾಲೆಯ ಮುಖ್ಯ ಶಿಕ್ಷಕಿ ವನಜಾಕ್ಷಿ ಮೊದಲಾದವರಿದ್ದರು.