ಲೋಕಬಂಧು ನ್ಯೂಸ್ ಉಡುಪಿ
ಶೈಕ್ಷಣಿಕ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿರುವ ಉಡುಪಿ ಜಿಲ್ಲೆ ಕೇಂದ್ರ ಸರ್ಕಾರದ ಮಾರ್ಗಸೂಚಿಯನ್ವಯ ಸಾಕ್ಷರತೆ ಹೊಂದಿರುವ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯನ್ನು ಸಂಪೂರ್ಣ ಸಾಕ್ಷರತಾ ಜಿಲ್ಲೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ರಿಜ್ವಾನ್ ಅರ್ಷದ್ ಭಾನುವಾರ ರಾಜ್ಯೋತ್ಸವ ಸಂದರ್ಭದಲ್ಲಿ ಘೋಷಿಸಿದರು.ಕಾರ್ಯಕ್ರಮಕ್ಕೂ ಮುನ್ನ ನಗರ ಪ್ರದೇಶದ ಶಾಲಾ ಹಾಗೂ ಕಾಲೇಜು ವಿದ್ಯಾರ್ಥಿಗಳಿಗೆ ಗ್ರಾಮೀಣ ಜೀವನದ ನೈಜ ಅನುಭವ, ಕೃಷಿ, ತೋಟಗಾರಿಕೆ, ಪಶುಸಂಗೋಪನೆ, ಕಲೆ ಹಾಗೂ ಸಂಸ್ಕೃತಿ ಕುರಿತು ಪ್ರಾಯೋಗಿಕ ಅರಿವು ಮೂಡಿಸುವ ಸಲುವಾಗಿ `ಗ್ರಾಮಾನುಭವ' ಕಾರ್ಯಕ್ರಮಕ್ಕೆ ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಚಾಲನೆ ನೀಡಿದರು.
ಶಾಸಕ ಯಶಪಾಲ್ ಸುವರ್ಣ, ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ., ಜಿ.ಪಂ. ಸಿಇಓ ಪ್ರತೀಕ್ ಬಾಯಲ್, ಶಿಕ್ಷಣ ಇಲಾಖೆಯ ಡಾ.ಅಶೋಕ್ ಕಾಮತ್ ಮೊದಲಾದವರಿದ್ದರು.